November 22, 2024
Capture

ರೆಸ್ಟೋರೆಂಟ್ ಸ್ಟೈಲ್ ಚಿಕನ್ ಗ್ರೇವಿ

ಬೇಕಾಗುವ ಪದಾರ್ಥಗಳು

  • ಚಿಕನ್ – ಅರ್ಧ ಕೆಜಿ
  • ಒಣಗಿದ ಮೆಣಸಿನಕಾಯಿ – 8-10
  • ಈರುಳ್ಳಿ – 2
  • ಟೊಮೆಟೊ – 2
  • ಗೋಡಂಬಿ – ಸ್ವಲ್ಪ
  • ಕೊತ್ತಂಬರಿ ಸೊಪ್ಪು- ಸ್ವಲ್ಪ
  • ಅರಿಸಿನ- ಸ್ವಲ್ಪ
  • ಎಣ್ಣೆ – ಸ್ವಲ್ಪ
  • ಉಪ್ಪು – ರುಚಿಗೆ ತಕ್ಕಷ್ಟು
  • ಅಚ್ಚ ಖಾರದ ಪುಡಿ- 1 ಚಮಚ
  • ದನಿಯಾ ಪುಡಿ – 1 ಚಮಚ
  • ಗರಂಮಸಾಲ – 1 ಚಮಚ
  • ಕಸೂರಿ ಮೇಥಿ  – 1 ಚಮಚ
  • ಶುಂಠಿ-ಬೆಳ್ಳುಳ್ಳಿ ಪೇಸ್ಟ್ –  ಸ್ವಲ್ಪ

ಮಾಡುವ ವಿಧಾನ..

  • ಮೊದಲು ಒಣಗಿದ ಮೆಣಸಿನ ಕಾಯಿಯನ್ನು ಸ್ವಲ್ಪ ಹೊತ್ತು ನೀರಿನಲ್ಲಿ ನೆನೆಸಿಟ್ಟುಕೊಳ್ಳಬೇಕು. ನಂತರ ನೆನೆದ ಒಣಮೆಣಸಿನಕಾಯಿ ಟೊಮೆಟೊ ಮತ್ತು ಗೋಡಂಬಿಯನ್ನು ಮಿಕ್ಸಿ ಜಾರಿಗೆ ಹಾಕಿ ನುಣ್ಣಗೆ ರುಬ್ಬಿಕೊಳ್ಳಬೇಕು.
  • ಬಾಣಲೆಯನ್ನು ಒಲೆಯ ಮೇಲಿಟ್ಟು ಬಿಸಿಯಾದ ಬಳಿಕ 2 ಚಮಚ ಎಣ್ಣೆ ಹಾಕಿ ಈರುಳ್ಳಿಯನ್ನು ಕೆಂಪಗೆ ಹುರಿದುಕೊಳ್ಳಿ. ಬಳಿಕ ಇದಕ್ಕೆ ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಹಾಕಿ ಒಂದು ನಿಮಿಷ ಹುರಿಯಿರಿ. ನಂತರ ತೊಳೆದಿಟ್ಟ ಚಿಕನ್ ಸೇರಿಸಿ ಅದಕ್ಕೆ ಅರಿಸಿನ, ಉಪ್ಪು, ಅಚ್ಚ ಖಾರದ ಪುಡಿ, ದನಿಯಾ ಪುಡಿ ಹಾಕಿ. ಚಿಕನ್ ಅರ್ಧ ಬೇಯುವವರೆಗೂ ಎಣ್ಣೆಯಲ್ಲಿ ಫ್ರೈ ಮಾಡಿ.

  • ಈಗ ರುಬ್ಬಿದ ಮಸಾಲೆಯನ್ನು ಸೇರಿಸಿ ಎಣ್ಣೆ ಬಿಡುವವರೆಗೂ ಬೇಯಿಸಿ. ಕೊನೆಯಲ್ಲಿ ಗರಂಮಸಾಲೆ, ಕಸೂರಿ ಮೇಥಿ, ಕೊತ್ತಂಬರಿ ಸೊಪ್ಪು ಹಾಗೂ ಅರ್ಧ ಲೋಟ ನೀರು ಸೇರಿಸಿ. 4 ನಿಮಿಷ ಕುದಿಸಿಕೊಂಡರೆ ರುಚಿಕರವಾದ ರೆಸ್ಟೋರೆಂಟ್ ಸ್ಟೈಲ್ ಚಿಕನ್ ಗ್ರೇವಿ ಸವಿಯಲು ಸಿದ್ಧ.

ಸಂಗ್ರಹ : SB

ಮೂಲ: KP

 

Leave a Reply

Your email address will not be published. Required fields are marked *