ಕಾಸರಗೋಡು ಕುಪ್ಪೆಪದವು ದಿವಂಗತ ಪಂಜ ಸೇಸಪ್ಪ ಭಂಡಾರಿಯವರ ಧರ್ಮಪತ್ನಿ ಸುಶೀಲಾ ಸೇಸಪ್ಪ (ಬೇಬಿ) ಭಂಡಾರಿ ಮೇ 27 ರ ಭಾನುವಾರ ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದರು. ಅವರಿಗೆ ಸುಮಾರು 85 ವರ್ಷ ವಯಸ್ಸಾಗಿತ್ತು. ಮೃತರು ಏಳು ಜನ ಮಕ್ಕಳು ಮತ್ತು ಅಪಾರ ಬಂಧುವರ್ಗದವರನ್ನು ಅಗಲಿದ್ದಾರೆ.
ಅಗಲಿದ ಹಿರಿಯ ಚೇತನಕ್ಕೆ ಚಿರಶಾಂತಿ ಲಭಿಸಲಿ ಮತ್ತು ದುಃಖತಪ್ತ ಕುಟುಂಬಕ್ಕೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ದಯಪಾಲಿಸಲಿ ಎಂದು ಭಂಡಾರಿ ಕುಟುಂಬದ ಮನೆಮನದ ಮಾತು “ಭಂಡಾರಿವಾರ್ತೆ” ಶ್ರೀ ದೇವರಲ್ಲಿ ಪ್ರಾರ್ಥಿಸುತ್ತದೆ.
-ಭಂಡಾರಿವಾರ್ತೆ.