January 18, 2025
sachina

ಕಳೆದ ಜನವರಿ 7 ನೇ ತಾರೀಕಿನಂದು ಬಿ.ಸಿ ರೋಡು – ಬಂಟ್ವಾಳ ಸರ್ಕಲ್ ಸಮೀಪ ನಡೆದ ಅಪಘಾತದಲ್ಲಿ ತಲೆಗೆ ತೀವ್ರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ತಾಲೂಕು ಪೊಳಲಿ, ಕರಿಯಂಗಳ ದಯಾನಂದ ಭಂಡಾರಿ ಯವರ ಪತ್ನಿ ಸಚಿನಾ ಪಿ.ಜಿ ( 36 ವ) ಯವರು ಚಿಕಿತ್ಸೆ ಫಲಕಾರಿಯಾಗದೆ ಏಪ್ರಿಲ್ 10 ರ ಶನಿವಾರ ಮಧ್ಯಾಹ್ನ ವಿಧಿವಶರಾದರು.


ಇವರು ಪತಿ ಮತ್ತು ಎರಡು ವರ್ಷದ ಹೆಣ್ಣು ಮಗುವನ್ನು ಅಗಲಿದ್ದಾರೆ.

ಸಚಿನಾ ರವರು ನೇತ್ರಾವತಿ ಸ್ತ್ರೀ ಶಕ್ತಿ ಮಹಿಳಾ ವಿವಿಧೋದ್ಧೇಶ ಸಹಕಾರಿ ಸಂಘದಲ್ಲಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದರು.

ಮೃತರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ , ಕುಟುಂಬಕ್ಕೆ ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ತುಂಬಲಿ ಎಂದು ಭಂಡಾರಿ ಕುಟುಂಬದ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.

ಭಂಡಾರಿ ವಾರ್ತೆ

 

Leave a Reply

Your email address will not be published. Required fields are marked *