
ದಕ್ಷಿಣ ಕನ್ನಡ ಜಿಲ್ಲೆಯ ಪಾಣೆಮಂಗಳೂರು ನರೇಂದ್ರ ಭಂಡಾರಿ ಮತ್ತು ಶ್ರೀಮತಿ ಸುರೇಖಾ ಭಂಡಾರಿಯವರ ಪುತ್ರಿ ಕುಮಾರಿ ದಿಶಾ ಭಂಡಾರಿಯವರು 2021-22 ರ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ 566 (94.3% ) ಅಂಕಗಳೊಂದಿಗೆ ತೇರ್ಗಡೆಯಾಗುವುದರೊಂದಿಗೆ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಕುಮಾರಿ ದಿಶಾ ಭಂಡಾರಿ ಇವರು ಬಂಟ್ವಾಳ ಎಸ್.ವಿ.ಎಸ್. ಕಾಲೇಜಿನ ವಿದ್ಯಾರ್ಥಿನಿ.ಕುಮಾರಿ ದಿಶಾ ಭಂಡಾರಿ ಇವರು ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ದೊಡ್ಡ ಸಾಧನೆ ಮಾಡಲಿ , ಪೋಷಕರಿಗೆ ,ಸಮಾಜಕ್ಕೆ ಹೆಮ್ಮೆ ತರಲಿ, ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.