January 18, 2025
sharadi-sudhakar

ಮಣಿಪಾಲದ ಮಾಧವಕೃಪಾ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿನಿಯಾಗಿರುವ ಶರಧಿ ಸುಧಾಕರ್ ಭಂಡಾರಿ ಶಾಲಾ ಕ್ರೀಡಾಕೂಟದಲ್ಲಿ ಬ್ರಾಡ್ ಜಂಪ್ ನಲ್ಲಿ ಭಾಗವಹಿಸಿ ದ್ವಿತೀಯ ಬಹುಮಾನ ಗಳಿಸಿರುತ್ತಾರೆ. ಇವರು ಕಾಪು ಪೋಲಿಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಸುಧಾಕರ್ ಭಂಡಾರಿ ಮುಕ್ಕ ಮತ್ತು ಶ್ರೀಮತಿ ಉಷಾರಾಣಿ ಸುಧಾಕರ್ ಭಂಡಾರಿ ಮುಕ್ಕ ಇವರ ಸುಪುತ್ರಿ.

ವಿದ್ಯಾಭ್ಯಾಸ ಮತ್ತು ಕ್ರೀಡೆಯಲ್ಲದೇ  ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುತ್ತಾ ಬಂದಿರುವ ಶರಧಿಯ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬದ ಮನೆಮನದ ಮಾತು ಭಂಡಾರಿವಾರ್ತೆ ಶುಭ ಹಾರೈಸುತ್ತದೆ.

ವರದಿ: ಕುಶಲ್ ಕುಮಾರ್.
ನಿರೂಪಣೆ: ಭಾಸ್ಕರ್ ಭಂಡಾರಿ ಶಿರಾಳಕೊಪ್ಪ.

Leave a Reply

Your email address will not be published. Required fields are marked *