ಶ್ರೀ ನಾರಾಯಣ ಭಂಡಾರಿ ಮತ್ತು ಶ್ರೀಮತಿ ಯಶೋಧ ನಾರಾಯಣ ಭಂಡಾರಿ ದಂಪತಿಗಳು ಡಿಸೆಂಬರ್ 27 ರ ಬುಧವಾರ ಬಂಟ್ವಾಳ ತಾಲೂಕಿನ ಸೊರ್ನಾಡ್ ಬಂಡಶಾಲೆಯ ತಮ್ಮ ಸ್ವಗೃಹ ನವ್ಯ ನಿಧಿ ಯಲ್ಲಿ ತಮ್ಮ ವೈವಾಹಿಕ ಜೀವನದ ಮೂವತ್ತನೇ ವರ್ಷದ ವಾರ್ಷಿಕೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಿಕೊಂಡರು.
ಬಂಟ್ವಾಳದ ಎಸ್.ವಿ.ಎಸ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀ ನಾರಾಯಣ ಭಂಡಾರಿಯವರ ಪತ್ನಿ ಶ್ರೀಮತಿ ಯಶೋಧ ನಾರಾಯಣ ಭಂಡಾರಿಯವರು ಬಂಟ್ವಾಳದ ಬಿ.ಎಸ್.ಎನ್.ಎಲ್ ಕಛೇರಿಯಲ್ಲಿ ಆಫೀಸ್ ಸೂಪರಿಂಟೆಂಡೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಇವರ ವಿವಾಹ ವಾರ್ಷಿಕೋತ್ಸವದ ಶುಭ ಸಂದರ್ಭದಲ್ಲಿ ಇವರ ಪುತ್ರಿಯರಾದ ನಿಧಿ ಮತ್ತು ನವ್ಯ, ಅಳಿಯ ನಿತ್ಯಾನಂದ ಭಂಡಾರಿ ಹಾಗೂ ಬಂಧುಗಳು, ಸಹೋದ್ಯೋಗಿಗಳು, ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಆಗಮಿಸಿ ಅಭಿನಂದಿಸಿದರು.
ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿರುವ ದಂಪತಿಗಳಿಗೆ ಭಗವಂತನು ಆಯುರಾರೋಗ್ಯ ಐಶ್ವರ್ಯ ಭಾಗ್ಯವನ್ನಿತ್ತು ಆಶೀರ್ವದಿಸಲಿ ಎಂದು ಭಂಡಾರಿ ಕುಟುಂಬದ ಮನೆಮನದ ಮಾತು ಭಂಡಾರಿವಾರ್ತೆ ಹಾರೈಸುತ್ತದೆ.
— ಭಂಡಾರಿವಾರ್ತೆ