ವಿಕುಭ ಹೆಬ್ಬಾರಬೈಲು,ಪ್ರಿಯಾ ಹೆಬ್ಬಾರಬೈಲು ಕಾವ್ಯನಾಮದಿಂದ ತುಳು ಭಾಷಾ ಸಾಹಿತ್ಯ ಪ್ರಿಯರಿಗೆ ಚಿರಪರಿಚಿತರಾಗಿರುವ “ಶ್ರೀ ವಿಜಯಕುಮಾರ ಭಂಡಾರಿ ಹೆಬ್ಬಾರಬೈಲು” ಇವರಿಗೆ “ಕರ್ನಾಟಕ ಸಾಧನ ಗೌರವ ಪ್ರಶಸ್ತಿ” ಒಲಿದು ಬಂದಿದೆ.
“ಪೂವರಿ” ತುಳು ಮಾಸಪತ್ರಿಕೆಯ ಪ್ರಧಾನ ಸಂಪಾದಕ, ತುಳು ಸಂಘಟಕ ಶ್ರೀ ವಿಜಯಕುಮಾರ ಭಂಡಾರಿ ಹೆಬ್ಬಾರಬೈಲು ಇವರ “ತುಳು ಬಾಷೆ ಮತ್ತು ತುಳು ಪತ್ರಿಕೆ ” ಕ್ಷೇತ್ರದಲ್ಲಿನ ವಿಶೇಷ ಸಾಧನೆಯನ್ನು ಗುರುತಿಸಿ “ಕರ್ನಾಟಕ ಸಾಧನ ಗೌರವ ಪ್ರಶಸ್ತಿ” ನೀಡಿ ಗೌರವಿಸಲಾಯಿತು.
ಮೂಡುಬಿದಿರೆ ಸಮೀಪದ ಅಲಂಗಾರು ಬಡಗ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಯಲು ರಂಗಮಂದಿರದಲ್ಲಿ ನಡೆದ “9 ನೇ ಅಖಿಲ ಕರ್ನಾಟಕ ಬೆಳದಿಂಗಳ ತುಳು ಸಾಹಿತ್ಯ ಸಮ್ಮೇಳನ” ದಲ್ಲಿ ಮೂಡಬಿದಿರೆಯ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ಮೋಹನ್ ಅಳ್ವಾರವರು ಪ್ರಶಸ್ತಿ ಪ್ರದಾನ ಮಾಡಿ ಶುಭ ಹಾರೈಸಿದರು.ಬೆಳದಿಂಗಳ ತುಳು ಸಾಹಿತ್ಯ ಸಮ್ಮೇಳನದ ಸಮಿತಿ ಅಧ್ಯಕ್ಷರಾದ ಶ್ರೀ ಶೇಖರ್ ಅಜೆಕಾರು ಅಧ್ಯಕ್ಷತೆ ವಹಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯ ಎನ್.ಎಸ್.ಎಸ್ ಘಟಕ, ಬೆಂಗಳೂರು ಅಧಿಕಾರಿ ಡಾ||ಗಣನಾಥ್ ಎಕ್ಕಾರು,ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಪ್ರದೀಪ್ ಕುಮಾರ್ ಕಲ್ಕೂರು,ಮೂಡುಬಿದಿರೆ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀ ಸೀತಾರಾಮ ಆಚಾರ್ಯ ಮುಂತಾದವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಹಲವಾರು ಕೃತಿಗಳನ್ನು ತುಳು ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆಯಾಗಿ ನೀಡಿರುವ ಶ್ರೀ ವಿಜಯಕುಮಾರ ಭಂಡಾರಿ ಹೆಬ್ಬಾರಬೈಲು ಇವರು ಬಂಟ್ವಾಳ ತುಳು ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ, ಪುತ್ತೂರು ಜಾನಪದ ಸಾಹಿತ್ಯ ವೇದಿಕೆ ಅಧ್ಯಕ್ಷರಾಗಿ, ಪುತ್ತೂರು ತಾಲ್ಲೂಕು ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ, ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜ್ ಮಾಲೀಕರ ಸಂಘದ ವಿಟ್ಲ ವಲಯದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಪ್ರಸ್ತುತ ಪುತ್ತೂರು ತುಳು ಕೂಟದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ವರದಿ: ಭಾಸ್ಕರ್ ಭಂಡಾರಿ ಶಿರಾಳಕೊಪ್ಪ.
Congratulations 💐💐