ಸಂಚಾರಿ ನಿಯಮ ಉಲ್ಲಂಘಿಸಿ ದಂಡದ ಮೊತ್ತವನ್ನು ಕಟ್ಟದೆ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರಿಗೆ ಸರ್ಕಾರ ಭರ್ಜರಿ ರಿಯಾಯಿತಿಯನ್ನು ಘೋಷಿಸಿದೆ. ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಶಿಫಾರಸ್ಸಿನ ಮೇರೆಗೆ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲು ಸರಕಾರ ಆದೇಶ ಹೊರಡಿಸಿದೆ.
ಈ ಕೆಳಗಿರುವ ಲಿಂಕ್ ಮೂಲಕ ನಿಮ್ಮ ವಾಹನದ ಬಾಕಿ ಇರುವ ಫೈನ್ ತಿಳಿದುಕೊಂಡು ನೇರವಾಗಿ ಪಾವತಿ ಮಾಡಿಕೊಳ್ಳಬಹುದು. ನೆನಪಿಡಿ ಕೊನೆಯ ದಿನಾಂಕ ಫೆಬ್ರವರಿ 11 ರ ಶನಿವಾರ.
https://www.karnatakaone.gov.in/
ಹಾಗಾಗಿ ಸಂಚಾರಿ ನಿಯಮ ಉಲ್ಲಂಘಿಸಿ ದಂಡ ಕಟ್ಟದೆ ಬಾಕಿ ಉಳಿಸಿಕೊಂಡಿರುವವರು ಅದನ್ನು ಸುಲಭವಾಗಿ ಪಾವತಿಸಿ ಮುಕ್ತರಾಗಬಹುದು.ಇದೇ ಫೆಬ್ರವರಿ 11ರಂದು ರಾಷ್ಟ್ರೀಯ ಲೋಕ್ ಅದಾಲತ್ ಹಿನ್ನೆಲೆಯಲ್ಲಿ ಈ ಆದೇಶವನ್ನು ಮಾಡಲಾಗಿದೆ.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ ನಿರ್ವಾಹಕ ಅಧ್ಯಕ್ಷರೂ ಆಗಿರುವ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಬಿ.ವೀರಪ್ಪ ಅಧ್ಯಕ್ಷತೆಯಲ್ಲಿ ಕಳೆದ ಜ.27ರಂದು ನಡೆದ ಸಭೆಯಲ್ಲಿ ಸಮಗ್ರ ಚರ್ಚೆ ನಡೆಸಲಾಗಿತ್ತು. ನಂತರ ಕಾನೂನು ಸೇವೆಗಳ ಪ್ರಾಧಿಕಾರದ ಸರಕಾರಕ್ಕೆ ಮನವಿ ಸಲ್ಲಿಸಿತ್ತು.ಅದರಂತೆ ರಿಯಾಯಿತಿ ಸರಕಾರ ಶೇ.50ರಷ್ಟು ರಿಯಾಯಿತಿ ನೀಡಲು ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.