January 18, 2025
img_privatejobs

                                                      ಉದ್ಯೋಗ ಮತ್ತು ತರಬೇತಿ ಇಲಾಖೆ                                                       

Department of Employment and Training 

 
  ಉದ್ಯೋಗ ಮೇಳ
 
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಡಾ.ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು, ಉಡುಪಿ ಇವರ ಜಂಟಿ ಅಶ್ರಯದಲ್ಲಿ ದಿನಾಂಕ 30-01-2018 ರಂದು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿರುತ್ತದೆ. ಈ ಉದ್ಯೋಗ ಮೇಳದಲ್ಲಿ ವಿವಿಧ ಕಂಪೆನಿ/ಸಂಸ್ಥೆಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
       ಉದ್ಯೋಗಾಕಾಂಕ್ಷಿಗಳ ನೇಮಕ ಮಾಡಿಕೊಳ್ಳಲಿರುವುದರಿಂದ ಖಾಸಗಿ ವಲಯದಲ್ಲಿನ ಉದ್ಯೋಗಕ್ಕೆ ಆಸಕ್ತರಿರುವ ಎಸ್.ಎಸ್.ಎಲ್.ಸಿ/ಪಿ.ಯು.ಸಿ/ಯಾವುದೇ ಪದವಿ/ಡಿಪ್ಲೋಮಾ/ಐ.ಟಿ.ಐ/ಸ್ನಾತ್ತಕೋತ್ತರ ಹಾಗೂ ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ವಿದ್ಯಾರ್ಹತೆಯ ಅಭ್ಯರ್ಥಿಗಳು ವಿದ್ಯಾರ್ಹತೆ ಅಂಕಪಟ್ಟಿ/ರೆಸ್ಯೂಮ್(ಬಯೋಡೇಟಾ) ಇತ್ಯಾದಿ ದಾಖಲೆಗಳೊಂದಿಗೆ 30-01-2018 ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಹಾಜರಾಗಲು ಈ ಮೂಲಕ ತಿಳಿಸಲಾಗಿದೆ.
      ಉದ್ಯೋಗ ಮೇಳ ನಡೆಯುವ ಸ್ಥಳ ಮತ್ತು ಸಮಯ:
 ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ 
ದಿನಾಂಕ:30-01-2018 ಬೆಳಗ್ಗೆ 10.00 ಗಂಟೆ   
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0820 2574869 ಅಥವಾ ಮೊಬೈಲ್ ಸಂಖ್ಯೆ 9480259790 ನ್ನು ಸಂಪರ್ಕಿಸಬಹುದು

Leave a Reply

Your email address will not be published. Required fields are marked *