November 22, 2024
karate praveen

ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಗಳಲ್ಲಿ ಜಯಗಳಿಸಿ ಅಂತರ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆ ಯಾಗಿದ್ದ ಅರ್ಜುನ್ ನಾರಾಯಣ್ ಪಾಂಡೀಚೆರಿಯಲ್ಲಿ ಜರುಗಿದ ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ ಷಿಪ್-2017 ರಲ್ಲಿ ಕುಮಿಟೆ ವಿಭಾಗದಲ್ಲಿ ಥೈಲ್ಯಾಂಡ್ ನ ಕರಾಟೆ ಪ್ರತಿಭೆಯೆದುರು ಜಯಗಳಿಸಿ ಚಿನ್ನದ ಪದಕ ಗಳಿಸಿದ್ದಾರೆ. ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿಯ ಪದಕ ಗಳಿಸುವುದರೊಂದಿಗೆ ದೇಶಕ್ಕೆ ಕೀರ್ತಿ ತಂದಿದ್ದಾರೆ.
ಅರ್ಜುನ್ ಸುರತ್ಕಲ್ ನ ಹೋಲಿ ಫ್ಯಾಮಿಲಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಸುರತ್ಕಲ್ ಕುಳಾಯಿ ನಿವಾಸಿಗಳಾದ ಶ್ರೀ ಅಶ್ವತ್ ನಾರಾಯಣ್ ಮತ್ತು ಶ್ರೀಮತಿ ಜೋತ್ಸ್ನಾ ನಾರಾಯಣ್ ದಂಪತಿಗಳ ಸುಪುತ್ರ.
ಇವರು ಕರಾಟೆಯಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಲಿ, ದೇಶಕ್ಕೆ ಕೀರ್ತಿಯನ್ನು, ಹೆತ್ತವರಿಗೆ ಹೆಮ್ಮೆಯನ್ನು ತಂದುಕೊಡಲಿ ಎಂದು ಭಂಡಾರಿ ಕುಟುಂಬದ ಮನೆಮನದ ಮಾತು ಭಂಡಾರಿವಾರ್ತೆ ಶುಭ ಹಾರೈಸುತ್ತದೆ.

ವರದಿ: ಭಾಸ್ಕರ್ ಭಂಡಾರಿ ಶಿರಾಳಕೊಪ್ಪ.

Leave a Reply

Your email address will not be published. Required fields are marked *