September 20, 2024

.ಕಾರ್ಕಳ : ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರೊಬೇಷನರಿ ಸಬ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ನಿಧಿ ಬಿ.ಎನ್.ಅವರು ಕಲಬುರಗಿಯ ಪೊಲೀಸ್ ತರಬೇತಿ ಮಹಾವಿದ್ಯಾಲಯದಲ್ಲಿ ತರಬೇತಿ ಪಡೆಯುವ ಸಂದರ್ಭದಲ್ಲಿ ಅತ್ಯುತ್ತಮ ಆಲ್ ರೌಂಡರ್ ಪ್ರಶಸ್ತಿಯನ್ನು ಮತ್ತು ಮಹಿಳಾ ಹೊರಾಂಗಣ ವಿಭಾಗದ ಅತ್ಯುತ್ತಮ ನಿರ್ವಹಣ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ಸರಕಾರದ ಗೃಹಮಂತ್ರಿ ಅರಗ ಜ್ಞಾನೇಂದ್ರ ಅವರು ಖಡ್ಗ ಮತ್ತು ಟ್ರೋಫಿ ಹಾಗೂ ಪ್ರಶಸ್ತಿ ಗೌರವವನ್ನು ಸ್ವೀಕರಿಸಿದ ಸಲುವಾಗಿ ಕಾರ್ಕಳ ಭಂಡಾರಿ ಸಮಾಜ ಸಂಘದ ನೇತೃತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ನಿಧಿ ಬಿ.ಎನ್.ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಕಳ ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಶೇಖರ್ ಎಚ್. ಭಂಡಾರಿ ಅವರನ್ನು ಅಭಿನಂದಿಸಿ ಉತ್ತಮ ಕಾರ್ಯದಕ್ಷತೆಯಿಂದ ಮುಂದಕ್ಕೆ ಇನ್ನೂ ಪದೋನ್ನತಿ ಹೊಂದಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಗೌರವ ಸಿಗುವಂತಾಗಲಿ ಎಂದು ಹಾರೈಸಿದರು.

ಕಾರ್ಯದರ್ಶಿ ವಿಶ್ವನಾಥ ಭಂಡಾರಿ , ಗೌರವ ಅಧ್ಯಕ್ಷ ಶಶಿಧರ್ ಕಾರ್ಕಳ ,ಸವಿತಾ ಸಮಾಜದ ಅಧ್ಯಕ್ಷ ನಾಗೇಶ್ ಬಜಗೋಳಿ ಜಿಲ್ಲಾಧ್ಯಕ್ಷ ವಿಶ್ವನಾಥ ಭಂಡಾರಿ ನಿಂಜೂರು, ಮಹಿಳಾ ಸಂಘದ ಅಧ್ಯಕ್ಷೆ ಅನಿತಾ ಸದಾನಂದ ಭಂಡಾರಿ, ಕಾರ್ಯದರ್ಶಿ ರೇಷ್ಮಾ ಸುದರ್ಶನ್ ಭಂಡಾರಿ , ಗೋಪಾಲ ಭಂಡಾರಿ , ಜಿ ವಿ ಇಂದಿರಾ ಗೋಪಾಲ ಭಂಡಾರಿ , ನವ್ಯ ನಿತ್ಯಾನಂದ ಹಾಗೂ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

-ಭಂಡಾರಿ ವಾರ್ತೆ

Leave a Reply

Your email address will not be published. Required fields are marked *