ಉಡುಪಿ ಹಾವಂಜೆಯ ಶ್ರೀ ನವೀನ್ ಭಂಡಾರಿ ಮತ್ತು ಶ್ರೀಮತಿ ಶೋಭಾ ಭಂಡಾರಿ ದಂಪತಿಯ ಪುತ್ರಿ ಕುಮಾರಿ ಮಾನ್ಯ ಭಂಡಾರಿ ಯವರು 2021-22 ರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 587 (93.92%) ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗುವುದರೊಂದಿಗೆ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಮಾನ್ಯ ಭಂಡಾರಿ ಉಡುಪಿಯ ಸರಕಾರಿ ಕೋಂಫೋಸೈಟ್ ಶಾಲೆಯ ವಿದ್ಯಾರ್ಥಿನಿ. ಮಾನ್ಯ ಭಂಡಾರಿ ಶೈಕ್ಷಣಿಕ ಕ್ಷೇತ್ರದಲ್ಲಿ ಇನ್ನಷ್ಟು ದೊಡ್ಡ ಸಾಧನೆ ಮಾಡಲಿ , ಪೋಷಕರಿಗೆ ,ಸಮಾಜಕ್ಕೆ ಹೆಮ್ಮೆ ತರಲಿ, ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.