September 20, 2024

ಸಾಗರ ತಾಲೂಕಿನ ಜೋಗರಸ್ತೆಯ  ಶ್ರೀ ಪರಮೇಶ್ವರ ಭಂಡಾರಿ ಮತ್ತು ಶ್ರೀಮತಿ ಶಶಿಕಲಾ ದಂಪತಿಗಳ ಪುತ್ರಿ ಸಿಂಚನಾ ಭಂಡಾರಿ ರವರು 2018-19ನೇ ಸಾಲಿನ ಎಸ್ ಎಸ್ ಎಲ್ ಸಿ  ಪರೀಕ್ಷೆಯಲ್ಲಿ 610 (97.6%) ಅಂಕಗಳೊಂದಿಗೆ ಅತ್ಯುನ್ನತ   ಶ್ರೇಣಿಯಲ್ಲಿ ತೇರ್ಗಡೆಯಾಗುವುದರೊಂದಿಗೆ ಗುರುಗಳ ವಿದ್ಯಾಸಂಸ್ಥೆಯ ಊರಿನ ಮತ್ತು ಷೋಷಕರ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಇವರು ಸಾಗರದ ಜೋಗರಸ್ತೆಯ ಪ್ರಗತಿ ಸಂಯುಕ್ತ ಪ್ರೌಢಶಾಲೆಯ ವಿದ್ಯಾರ್ಥಿನಿ.

ಈ ಸಾಧನೆ ಭಂಡಾರಿ ಸಮಾಜಕ್ಕೆ ಹೆಮ್ಮೆ ತರುವ ವಿಚಾರವಾಗಿದ್ದು ಇವರ ಸಾಧನೆಯನ್ನು ಶ್ಲಾಘಿಸುತ್ತಾ , ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.

ಭಂಡಾರಿ ವಾರ್ತೆ

Leave a Reply

Your email address will not be published. Required fields are marked *