ಉಡುಪಿ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಶ್ರೀಮತಿ ಪೂರ್ಣಿಮಾ ಅವರು ಜನವರಿ 29ನೇ ಶನಿವಾರದಂದು ಅಧಿಕಾರ ಸ್ವೀಕರಿಸಿದರು.
ಕರ್ನಾಟಕ ಸರಕಾರದ ಸೇವೆಗಾಗಿ 2000 ದಂದು ಬೆಂಗಳೂರಿನ ಕನ್ನಡ ಭವನದಲ್ಲಿ ವೃತ್ತಿಜೀವನವನ್ನು ಆರಂಭಿಸಿ 6 ವರ್ಷ ಸೇವೆ ಸಲ್ಲಿಸಿ ಬಳಿಕ ಉಡುಪಿ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವರ್ಗಾವಣೆಯಾಗಿ ಸೇವೆ ಸಲ್ಲಿಸಿತ್ತಾ ಜೊತೆಗೆ ಉಡುಪಿ ಜಿಲ್ಲೆಯ ಪ್ರಭಾರ ವಾರ್ತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಹಾಗೂ ಕೋಟ ಶಿವರಾಮ ಕಾರಂತ ಥೀಮ್ ಪಾರ್ಕ್ ನ ವಿಶೇಷ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮಂಗಳೂರಿನ ಬ್ಯಾರಿ ಅಕಾಡಮಿಯಲ್ಲಿ ರಿಜಿಸ್ಟರ್ ಆಗಿ ಕಳೆದ ಎರಡು ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದರು.
ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾಗಿರುವ ಶ್ರೀಮತಿ ಪೂರ್ಣಿಮಾ ಇವರು ಉಡುಪಿ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿರುವುದು ಉಡುಪಿಯ ನಾಗರಿಕರಿಗೆ ಸಂತಸ ಉಂಟು ಮಾಡಿದೆ.
ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ತನ್ನ ಪಿ.ಯು.ಸಿ.ಶಿಕ್ಷಣವನ್ನು ಮುಗಿಸಿದ ಬಳಿಕ ಮಂಗಳೂರಿನ ಬೋಂದೆಲ್ ಮಹಿಳಾ ಪಾಲಿಟೆಕ್ನಿಕ್ ತಾಂತ್ರಿಕ ಶಿಕ್ಷಣ ಸಂಸ್ಥೆಯಲ್ಲಿ ಎಲೆಕ್ಟ್ರಾನಿಕ್ಸ್ ಡಿಪ್ಲೊಮಾ ಪೂರೈಸಿ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪದವಿಯನ್ನು ಮುಗಿಸಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುತ್ತಾರೆ.
ಕುತ್ಪಾಡಿ ಸದಾನಂದ ಭಂಡಾರಿ ಮತ್ತು ಉದ್ಯಾವರ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷೆ ಚಂದ್ರಾವತಿ ಎಸ್. ಭಂಡಾರಿ ದಂಪತಿಯ ಪುತ್ರಿ ಹಾಗೂ ಕ್ಯಾಂಪ್ಕೋ ಸಂಸ್ಥೆಯ ಶಿವಮೊಗ್ಗ ಜಿಲ್ಲೆಯ ರಿಜಿನಲ್ ಮ್ಯಾನೇಜರ್ ಜಯ ಎಸ್. ಭಂಡಾರಿ ಅವರ ಪತ್ನಿ ಶ್ರೀಮತಿ ಪೂರ್ಣಿಮಾ.
ದಕ್ಷತೆ ಮತ್ತು ಪ್ರಾಮಾಣಿಕತೆಗೆ ಹೆಸರುವಾಸಿಯಾದ ತಾವು ಇಲಾಖೆಯಲ್ಲಿ ಉನ್ನತ ಹುದ್ದೆಗೆ ಬಡ್ತಿಗೊಂಡು ಸರಕಾರದ ಅತ್ಯುತ್ತಮ ಅಧಿಕಾರಿ ಎಂಬ ಪ್ರಶಂಸೆಗೆ ಪಾತ್ರರಾಗಿ ಜನತೆಗೆ ಅತ್ಯುತ್ತಮ ಸೇವೆ ಮಾಡುವ ಅವಕಾಶ ಸಿಗಲಿ ಎಂಬುದಾಗಿ ಭಂಡಾರಿ ಕುಟುಂಬದ ಮನೆ ಮನದ ಮಾತು ಭಂಡಾರಿ ವಾರ್ತೆ ಶುಭ ಹಾರೈಸುತ್ತದೆ.
-ಭಂಡಾರಿ ವಾರ್ತೆ