ಉಜಿರೆಯ ಕಂದ್ರಾಡಿಮನೆಯ ರುಕ್ಮಿಣಿ ಭಂಡಾರಿ ಇವರು ಇಂದು ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಇವರು ಐದು ಜನ ಹೆಣ್ಣು ಮಕ್ಕಳು, ಅಳಿಯಂದಿರು, ಮೊಮ್ಮಕ್ಕಳು, ಮರಿಮಕ್ಕಳು ಹಾಗೂ ಅಪಾರ ಬಂಧುಬಳಗದವರನ್ನು ಅಗಲಿದ್ದಾರೆ. ಅವರ ಕುಟುಂಬವರ್ಗದವರಿಗೆ ಹಾಗೂ ಬಂಧುಬಳಗದವರಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ನೀಡಲಿ. ರುಕ್ಮಿಣಿ ಭಂಡಾರಿಯವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಭಂಡಾರಿವಾರ್ತೆ ಭಗವಂತನಲ್ಲಿ ಪ್ರಾರ್ಥಿಸುತ್ತದೆ.
— ಭಂಡಾರಿವಾರ್ತೆ