ಮಂಗಳೂರು ಮಹಾನಗರ ಪಾಲಿಕೆಯ ವಿಶೇಷ ಭೂ ಸ್ವಾಧೀನಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗೀತಾ ಭಂಡಾರಿ ಆಗಸ್ಟ್ 31 ರಂದು ಸರಕಾರಿ ಸೇವೆಯಿಂದ ನಿವೃತ್ತಿ ಹೊಂದಿದ್ದಾರೆ. ಇವರು ಪುತ್ತೂರು ತಾಲೂಕಿನ ನೆಲ್ಲಿಕಟ್ಟೆ ನಿವಾಸಿ ದಿವಂಗತ ಲಕ್ಷ್ಮಣ ಭಂಡಾರಿ ಮತ್ತು ದಿವಂಗತ ದೇವಕಿ ದಂಪತಿಗಳ ಪುತ್ರಿ.
ಇವರು ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೆಲ್ಲಿಕಟ್ಟೆ, ಪ್ರೌಢಶಾಲೆ ಮತ್ತು ಪಿಯುಸಿ ಶಿಕ್ಷಣವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಪುತ್ತೂರು ಹಾಗೂ ಪದವಿ ಶಿಕ್ಷಣವನ್ನು ಸೇಂಟ್ ಫಿಲೋಮಿನಾ ಕಾಲೇಜು ಪುತ್ತೂರಿನಲ್ಲಿ ಪಡೆದಿರುತ್ತಾರೆ. ಬಲ್ಲಾಳ್ ಮೋಟರ್ಸ್ ಸಂಸ್ಥೆಯಲ್ಲಿ ಮೆನೇಜರ್ ಆಗಿ ಕಾರ್ಯ ನಿರ್ವಹಿಸಿದ್ದ ರಾಘವ ಭಂಡಾರಿ ಪಾ0ಗಾಳ ಇವರೊಂದಿಗೆ 1983 ಮೇ 19ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಇವರು, ಮಾರ್ಚ್ 1981 ರಂದು ಮಿತ ವೇತನ ಪದವೀಧರ ಹುದ್ದೆಗೂ ಆಯ್ಕೆಯಾಗಿದ್ದರು. ಮಂಗಳೂರಿನ ಜಿಲ್ಲಾ ಖಜಾನಾಧಿಕಾರಿ ಕಚೇರಿ, ಮಂಗಳೂರು ತಾಲೂಕು ಕಚೇರಿ, ಮಂಗಳೂರು ತಾಲೂಕು ಪಂಚಾಯತ್ ಕಚೇರಿ ಸೇರಿದಂತೆ ಮಂಗಳೂರು ಮಹಾನಗರ ಪಾಲಿಕೆಯ ವಿಶೇಷ ಭೂಸ್ವಾಧೀನ ಅಧಿಕಾರಿ ಕಚೇರಿಯಲ್ಲಿ ಕಳೆದ ಎರಡು ವರ್ಷಗಳಿಂದ ಸೇವೆ ಸಲ್ಲಿಸಿರುವ ಇವರು ಸುಮಾರು ಮೂವತ್ತಾರು ವರ್ಷಗಳ ಕಾಲ ಸರಕಾರದ ಕಂದಾಯ ಇಲಾಖೆಯಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿ ಕರ್ತವ್ಯದಿಂದ ನಿವೃತ್ತಿ ಹೊಂದಿದ್ದಾರೆ. ಪ್ರಸ್ತುತ ಪುತ್ರ ಗೌತಮ್ ಮತ್ತು ಸೊಸೆ ಹರ್ಷಿತಾ ಅವರೊಂದಿಗೆ ಮಂಗಳೂರಿನ ಗೌರಿ ಮಠದ ಬಳಿ ವಾಸವಾಗಿದ್ದಾರೆ.
– ಭಂಡಾರಿ ವಾರ್ತೆ