

ಉಡುಪಿ ಕುಕ್ಕಿಕಟ್ಟೆಯ ಶ್ರೀ ರಾಧಾಕೃಷ್ಣ ಭಂಡಾರಿ ಮತ್ತು ಶ್ರೀಮತಿ ವನಿತಾ ರಾಧಾಕೃಷ್ಣ ಭಂಡಾರಿ ದಂಪತಿಯು ಮೇ 15 ರ ಮಂಗಳವಾರ ತಮ್ಮ ವೈವಾಹಿಕ ಜೀವನದ ಹದಿನಾರನೆಯ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಮಗಳು ವೈಭವಿಯೊಂದಿಗೆ ಸಡಗರ ಸಂಭ್ರಮದಿಂದ ಆಚರಿಸಿಕೊಳ್ಳುತ್ತಿದ್ದಾರೆ.
ಈ ಸುಸಂದರ್ಭದಲ್ಲಿ ಕುಟುಂಬಸ್ಥರು,ಆತ್ಮೀಯರು,ಹಿತೈಷಿಗಳು ವಾರ್ಷಿಕೋತ್ಸವದ ಸಂಭ್ರಮದಲ್ಲಿರುವ ದಂಪತಿಗೆ ಶುಭ ಹಾರೈಸಿದ್ದಾರೆ.
ಹದಿನಾರು ವರ್ಷಗಳ ದಾಂಪತ್ಯ ಜೀವನವನ್ನು ಪೂರೈಸಿ ಹದಿನೇಳನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ದಂಪತಿಗೆ ಶ್ರೀ ದೇವರು ಆಯುರಾರೋಗ್ಯವನ್ನೂ ಐಶ್ವರ್ಯಗಳನ್ನೂ ದಯಪಾಲಿಸಿ,ನೆಮ್ಮದಿಯ ಬಾಳು ನಡೆಸುವಂತೆ ಆಶೀರ್ವದಿಸಲಿ ಎಂದು ಭಂಡಾರಿ ಕುಟುಂಬದ ಮನೆ ಮನದ ಮಾತು “ಭಂಡಾರಿವಾರ್ತೆ” ಶುಭ ಹಾರೈಸುತ್ತದೆ.

-ಭಂಡಾರಿವಾರ್ತೆ