
ಅಲಂಗಾರು ಬನ್ನಡ್ಕದ ಶ್ರೀ ನವೀನ್ ಚಂದ್ರ ಭಂಡಾರಿಯವರು ಇತ್ತೀಚೆಗೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಜರುಗಿದ ಎಪ್ಪತ್ತೊಂದನೇ ಸೀನಿಯರ್ ವೇಟ್ ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ 67 ಕೆ.ಜಿ.ವಿಭಾಗದಲ್ಲಿ ಬೆಳ್ಳಿ ಪದಕ ಗಳಿಸಿದ್ದಾರೆ.

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಇವರು ಅಲಂಗಾರು ಬನ್ನಡ್ಕ ದ ಶ್ರೀ ಸೋಮಪ್ಪ ಭಂಡಾರಿ ಮತ್ತು ಶ್ರೀಮತಿ ಜಯಂತಿ ಸೋಮಪ್ಪ ಭಂಡಾರಿ ದಂಪತಿಯ ಪುತ್ರ.

ನಮ್ಮ ಭಂಡಾರಿ ಸಮಾಜದ ಯುವಕನೋರ್ವ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವುದು ನಮಗೆಲ್ಲ ಸಂತಸದ ವಿಷಯ, ಇದರ ಜೊತೆಗೆ ಅವರು ವೇಟ್ ಲಿಫ್ಟಿಂಗ್ ನಲ್ಲಿ ರಾಷ್ಟ್ರೀಯ ಮಟ್ಟದ ಸಾಧನೆ ಮಾಡಿರುವುದು ನಮಗೆಲ್ಲ ಹೆಮ್ಮೆಯ ವಿಷಯವೇ ಸರಿ. ಅವರು ಇಂತಹ ಇನ್ನಷ್ಟು ಸಾಧನೆಗಳನ್ನು ಮಾಡಿ ಭಂಡಾರಿ ಸಮಾಜಕ್ಕೆ ಕೀರ್ತಿ, ಗೌರವ ತಂದುಕೊಡಲಿ, ಅವರಿಗೆ ಶ್ರೀ ದೇವರು ಆಯುರಾರೋಗ್ಯವನ್ನಿತ್ತು ಆಶೀರ್ವದಿಸಲಿ ಎಂದು ಭಂಡಾರಿ ಕುಟುಂಬದ ಮನೆ ಮನದ ಮಾತು “ಭಂಡಾರಿವಾರ್ತೆ” ಹಾರ್ದಿಕವಾಗಿ ಶುಭ ಹಾರೈಸುತ್ತದೆ.
ವರದಿ : ಭಾಸ್ಕರ ಭಂಡಾರಿ ಶಿರಾಳಕೊಪ್ಪ.