
ಮಂಗಳೂರು ತಾಲ್ಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಬೊಕ್ಕಪಟ್ಣ ಇಲ್ಲಿನ ಪ್ರಭಾರ ಮುಖ್ಯ ಶಿಕ್ಷಕ ಬಾಲಕೃಷ್ಣ ಎಲ್. ಭಂಡಾರಿ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಮುಲ್ಕಿ ಇಲ್ಲಿನ ಪ್ರೌಢಶಾಲಾ ವಿಭಾಗದ ಶಿಕ್ಷಕಿ ವಾಣಿ ದಂಪತಿಯ ಪುತ್ರ ಸುಜನ್. ಬಿ.ಭಂಡಾರಿ ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠ ಕಿಲ್ಪಾಡಿ ಮುಲ್ಕಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿ ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 601 ( 96.16 %) ಅಂಕ ಗಳಿಸಿದ್ದಾರೆ.
ಸುಜನ್ ಭಂಡಾರಿಯವರು ಮುಂದಿನ ಶೈಕ್ಷಣಿಕ ಕ್ಷೇತ್ರದಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ಉನ್ನತ ಶಿಕ್ಷಣವನ್ನು ಪಡೆದು ಉತ್ತಮ ಭವಿಷ್ಯವನ್ನು ಪಡೆಯಲಿ ಎಂದು ಭಂಡಾರಿ ಕುಟುಂಬದ ಮನೆ ಮನದ ಮಾತು ಭಂಡಾರಿ ವಾರ್ತೆಯ ಹಾರ್ದಿಕ ಶುಭ ಹಾರೈಕೆ.
–ಭಂಡಾರಿ ವಾರ್ತೆ