September 20, 2024

ಉಡುಪಿ ಜಿಲ್ಲೆಯ ಕಾರ್ಕಳ ಅಜೆಕಾರಿನ ಶ್ರೀ ಗಣಪತಿ ಭಂಡಾರಿ ಮತ್ತು ಶ್ರೀಮತಿ ಶೋಭಾ ಭಂಡಾರಿ ದಂಪತಿಯ ಪುತ್ರಿ ಸ್ವಾತಿ ಇವರು 2021-22 ರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 580 ಅಂಕಗಳೊಂದಿಗೆ (92.8%) ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗುವುದರೊಂದಿಗೆ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಸ್ವಾತಿ ಭಂಡಾರಿ ಇವರು ಅಜೆಕಾರಿನ ಚರ್ಚ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ. ಸ್ವಾತಿ ಭಂಡಾರಿ ಇವರು ಶಿಕ್ಷಣದಲ್ಲಿ ಇನ್ನಷ್ಟು ದೊಡ್ಡ ಸಾಧನೆ ಮಾಡಲಿ , ಪೋಷಕರಿಗೆ ,ಸಮಾಜಕ್ಕೆ ಹೆಮ್ಮೆ ತರಲಿ, ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.

Leave a Reply

Your email address will not be published. Required fields are marked *