
ಸ್ನಾನಕ್ಕೆ ಇಳಿದಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ್ಯು
ಬೆಳ್ತಂಗಡಿ: ಮಿತ್ತಬಾಗಿಲು ಇಲ್ಲಿಯ ಎರ್ಮಾಯಿ ಫಾಲ್ಸ್ ನಲ್ಲಿ ಸ್ನಾನಕ್ಕೆ ಇಳಿದಿದ್ದ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ನಡೆದಿದೆ.
ಧರ್ಮಸ್ಥಳ ಗ್ರಾಮದ ದೊಂಡೋಲೆ ನಿವಾಸಿ ಕೇಶವ ಭಂಡಾರಿ ಎಂಬವರ ಪುತ್ರ ಉಜಿರೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿವೇಕ್ ಮೃತಪಟ್ಟ ವಿದ್ಯಾರ್ಥಿ.
ಇಂದು ಮಧ್ಯಾಹ್ನ ನಂತರ ಕಾಲೇಜಿಗೆ ರಜೆ ಇದ್ದುದರಿಂದ ತನ್ನ ಸ್ನೇಹಿತರ ಜೊತೆ ಮಿತ್ತಬಾಗಿಲು ಗ್ರಾಮದ ಏಳೂವರೆ ಹಳ್ಳ ಎರ್ಮಾಯಿ ಫಾಲ್ಸ್ ಗೆ ಹೋಗಿ, ತೊಟ್ಲ್ಯಾಯಿ ಗುಂಡಿಯಲ್ಲಿ ಸ್ನಾನಕ್ಕೆ ಇಳಿದಿದ್ದಾರೆ ಎನ್ನಲಾಗಿದೆ.ಇನ್ನು ಈ ವೇಳೆ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ..