January 18, 2025
Raghu

ಉಡುಪಿ ಕೊಳಂಬೆಯ ದಿವಂಗತ ಬಾಬು ಭಂಡಾರಿ ಮತ್ತು ಶೋಭಾ ಬಾಬು ಭಂಡಾರಿ ದಂಪತಿಗಳ ದ್ವಿತೀಯ ಪುತ್ರರಾದ ರಾಘವೇಂದ್ರ ಭಂಡಾರಿಯವರು ದುಬೈ ಯಲ್ಲಿ ಮಾರ್ಚ್ 24 ರ ಶನಿವಾರ ಆಕಸ್ಮಿಕ ಮರಣ ಹೊಂದಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ಅವರು ಕಳೆದ ಕೆಲವು ವರ್ಷಗಳಿಂದ ದುಬೈ ದೇಶದಲ್ಲಿ ಉದ್ಯೋಗದಲ್ಲಿದ್ದರು.


ಹಲವಾರು ಕಾನೂನು ತೊಡಕುಗಳನ್ನು ನಿವಾರಿಸಿಕೊಂಡು ಮೃತದೇಹವನ್ನು ಸ್ವದೇಶಕ್ಕೆ ತರಲಾಗಿದ್ದು ಮೃತರ ಅಂತ್ಯ ಸಂಸ್ಕಾರ ಏಪ್ರಿಲ್ 3 ರ ಮಂಗಳವಾರ ಬೆಳಿಗ್ಗೆ 8:30 ಕ್ಕೆ ಉಡುಪಿಯ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದೆಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.
ಮೃತರ ಆತ್ಮಕ್ಕೆ ಭಗವಂತನು ಚಿರಶಾಂತಿ ಕರುಣಿಸಲಿ ಮತ್ತು ಕುಟುಂಬಸ್ಥರಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಶ್ರೀ ದೇವರು ದಯಪಾಲಿಸಲಿ ಎಂದು ಭಂಡಾರಿ ಕುಟುಂಬದ ಮನೆಮನದ ಮಾತು ಭಂಡಾರಿವಾರ್ತೆ ಪ್ರಾರ್ಥಿಸುತ್ತದೆ.

 

-ಭಂಡಾರಿವಾರ್ತೆ.

Leave a Reply

Your email address will not be published. Required fields are marked *