ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾರಾವಿಯ ಶ್ರೀ ನಾರಾಯಣ ಭಂಡಾರಿ ಮತ್ತು ಶ್ರೀಮತಿ ಭಾರತಿ ಭಂಡಾರಿ ದಂಪತಿಯ ಪುತ್ರ ವೈಭವ್ ಭಂಡಾರಿಯವರು 2021-22 ರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 619(99%) ಅಂಕಗಳೊಂದಿಗೆ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗುವುದರೊಂದಿಗೆ ಗುರುಗಳ ವಿದ್ಯಾಸಂಸ್ಥೆಯ ಊರಿನ ಮತ್ತು ಷೋಷಕರ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಈ ಸಾಧನೆ ಭಂಡಾರಿ ಸಮಾಜಕ್ಕೆ ಹೆಮ್ಮೆ ತರುವ ವಿಚಾರವಾಗಿದ್ದು ಇವರ ಸಾಧನೆಯನ್ನು ಶ್ಲಾಘಿಸುತ್ತಾ , ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.