January 18, 2025
135

        ಹಬ್ಬವನ್ನು ಮಾಘ ಮಾಸದ ಬಹುಳ ಚತುರ್ದಶಿಯಂದು ಆಚರಿಸಲಾಗುತ್ತದೆ. ಸಾಮಾನ್ಯವಾಗಿ ಫೆಬ್ರುವರಿ ಅಥವಾ ಮಾರ್ಚ್ ತಿಂಗಳಿನಲ್ಲಿ ಶಿವರಾತ್ರಿ ಹಬ್ಬ ಆಚರಿಸಲಾಗುತ್ತದೆ.
ಇಡೀ ದಿನ ಉಪವಾಸ, ಜಾಗರಣೆಗಳನ್ನು ಮಾಡಿ, ನಾಲ್ಕು ಯಾಮಗಳಲ್ಲೂ ಶಿವ ಪೂಜೆಯನ್ನು ಮಾಡುವ ಮೂಲಕ ಆಚರಿಸಲಾಗುತ್ತದೆ. ಶಿವನಿಗೆ ಬಿಲ್ವ ಪತ್ರೆಗಳನ್ನು ಅರ್ಪಿಸಿ ಪೂಜೆ ಸಲ್ಲಿಸುತ್ತಾರೆ. ಉತ್ತರ ಭಾರತ ಹಾಗೂ ನೇಪಾಳದಲ್ಲಿ ಶಿವನ ಆರಾಧಕರು ಭಂಗ ಮತ್ತು ಲಸ್ಸಿಯನ್ನು ಕುಡಿಯುತ್ತಾರೆ (ಮಹಾರಾಷ್ಟ್ರದಲ್ಲಿ ಇದನ್ನು ಕಡ್ಡಾಯವಾಗಿ ಕುಡಿದು ಹಬ್ಬವನ್ನು ಆಚರಿಸುತ್ತಾರೆ, ಇದು ಅಮಲು ಪದಾರ್ಥವಾಗಿದೆ) ಇದು ಶಿವನಿಗೆ ತುಂಬಾ ಪ್ರೀತಿಯೆಂದು ಹೇಳುತ್ತಾರೆ. ಮಹಾಶಿವರಾತ್ರಿ ಹಬ್ಬದ ಆಚರಣೆ ಕುರಿತಂತೆ ಅನೇಕ ದಂತಕಥೆಗಳನ್ನು ಪುರಾಣಗಳಲ್ಲಿ ಉಲ್ಲೇಖಿಸಲಾಗಿದೆ.

ನಂಬಿಕೆ
         ಮಹಾಶಿವರಾತ್ರಿಯ ದಿನ ಶಿವತತ್ತ್ವವು ಎಂದಿಗಿಂತ ೧೦೦೦ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ಶಿವತತ್ತ್ವದ ಲಾಭವು ಹೆಚ್ಚು ಪ್ರಮಾಣದಲ್ಲಿ ಸಿಗಲು ಮಹಾಶಿವರಾತ್ರಿಯ ದಿನ ಭಾವಪೂರ್ಣವಾಗಿ ಶಿವನ ಪೂಜೆ-ಅರ್ಚನೆಯನ್ನು ಮಾಡಬೇಕು; ಅದರೊಂದಿಗೆ ‘ಓಂ ನಮಃ ಶಿವಾಯ|’ ನಾಮಜಪವನ್ನು ಆದಷ್ಟು ಹೆಚ್ಚು ಮಾಡಬೇಕು. ಈ ದಿನದಂದು ‘ಓಂ ನಮಃ ಶಿವಾಯ|’ ಈ ನಾಮಜಪವನ್ನು ಮಾಡುವ ಜೀವಕ್ಕೆ ಶಿವನ ಸೂಕ್ಷ್ಮ-ಶಕ್ತಿ ಸಿಗುತ್ತದೆ. ಶಿವನ ಜನ್ಮವು ಸ್ಥೂಲ ಮತ್ತು ಸೂಕ್ಷ್ಮ ರೂಪದ ಕೆಟ್ಟ ಶಕ್ತಿಗಳನ್ನು ನಾಶ ಮಾಡಲು ಮತ್ತು ಮಾನವನ ಕಲ್ಯಾಣಕ್ಕಾಗಿ ಆಗಿದೆ.

ಹಲವು ವಾದಗಳು
        ಪ್ರತಿ ತಿಂಗಳೂ ಚತುರ್ದಶಿಯಂದು ಮಾಸ ಶಿವರಾತ್ರಿ. ಆದರೆ, ಮಾಘ ಕೃಷ್ಣ ಚತುರ್ದಶಿಯಂದು ಮಹಾಶಿವರಾತ್ರಿ. ಮಹಾಶಿವರಾತ್ರಿಯಂದು ಲಯಕರ್ತನಾದ ಶಿವ ಹುಟ್ಟಿದನೆಂಬ ನಂಬಿಕೆ ಕೆಲವರದು. ಇಲ್ಲ ಇಲ್ಲ, ಸಮುದ್ರ ಮಂಥನ ಕಾಲದಲ್ಲಿ ಶಿವನು ಹಾಲಾಹಲ ಕುಡಿದ ದಿನವೇ ಶಿವರಾತ್ರಿ ಎಂಬುದು ಇನ್ನು ಕೆಲವರ ವಾದ. ಮತ್ತೆ ಕೆಲವರು ಶಿವ – ಪಾರ್ವತಿಯನ್ನು ವರಿಸಿದ ದಿನ ಶಿವರಾತ್ರಿ ಎನ್ನುತ್ತಾರೆ. ಆದರೆ, ಶಿವರಾತ್ರಿಯ ದಿನ ಉಪವಾಸ ಮಾಡಿ, ಜಾಗರಣೆ ಮಾಡಿ ಶಿವನನ್ನು ರಾತ್ರಿಯಿಡೀ ಪೂಜಿಸುವುದು ವಾಡಿಕೆ.

ಮಹಾಶಿವರಾತ್ರಿ ವ್ರತ ಏಕೆ ಮಾಡಬೇಕು? (ನಂಬಿಕೆ ಮತ್ತು ಕಲ್ಪನೆ)
        ಶಿವನ ವಿಶ್ರಾಂತಿಯ ಕಾಲವೆಂದರೆ ಮಹಾಶಿವರಾತ್ರಿ. ಆ ಕಾಲದಲ್ಲಿ ಶಿವತತ್ತ್ವದ ಕಾರ್ಯ ನಿಂತುಹೋಗುತ್ತದೆ ಅಂದರೆ ಆ ಸಮಯದಲ್ಲಿ ಶಿವನು ಧ್ಯಾನಾವಸ್ಥೆಯಿಂದ ಸಮಾಧಿ ಅವಸ್ಥೆಗೆ ಹೋಗುತ್ತಾನೆ. ಶಿವನ ಸಮಾಧಿಸ್ಥಿತಿ ಅಂದರೆ ಶಿವನು ತನಗಾಗಿ ಸಾಧನೆ ಮಾಡುವ ಕಾಲ. ಆದುದರಿಂದ ಆ ಕಾಲದಲ್ಲಿ ವಿಶ್ವದಲ್ಲಿನ ತಮೋಗುಣ ಶಿವತತ್ತ್ವ ಸ್ವೀಕರಿಸುವುದಿಲ್ಲ. ಆದುದರಿಂದ ವಿಶ್ವದಲ್ಲಿ ತಮೋಗುಣ ಬಹಳ ಹೆಚ್ಚಾಗುತ್ತದೆ. ಅದರ ಪರಿಣಾಮ ನಮ್ಮ ಮೇಲಾಗಬಾರದೆಂದು ಮಹಾಶಿವರಾತ್ರಿಯ ವ್ರತವನ್ನು ಕೈಗೊಂಡು ಶಿವತತ್ತ್ವವನ್ನು ಆಕರ್ಷಿಸಬೇಕು,ಅನ್ನುವ ಉದ್ದೇಶ ಸಹ.

ಆಧ್ಯಾತ್ಮಿಕವಾಗಿ
        ವಿಶೇಷ ಸಂದರ್ಭಗಳಲ್ಲಿ ಧಾರ್ಮಿಕ ಕಾರ್ಯವಾದ ಉಪವಾಸ ಕೈಗೊಳ್ಳಲಾಗುತ್ತದೆ , ದೇವರ ಕಾರ್ಯವೆಂದೇ ನಂಬಲಾಗಿದೆ
ಸಂಸ್ಕೃತದಲ್ಲಿ ಉಪವಾಸ ಎಂದರೆ ‘ಉಪ’ = ‘ಬಳಿ’ , ‘ವಾಸ ‘ =’ಇರುವುದು ‘ ಅರ್ಥತ್ ದೇವರ ಬಳಿಯಲ್ಲಿ ಇರುವುದು , ದೇವರಿಗೆ ಮಾನಸಿಕವಾಗಿ ಹತ್ತಿರವಾಗುವುದು.

ಉಪವಾಸ ಮಾಡುವ ವೈಜ್ಞಾನಿಕ ಕಾರಣಗಳು
        ಉಪವಾಸ ರಕ್ತದ ಒತ್ತಡ, ಕೊಲೆಸ್ಟರಾಲ್ ಮಟ್ಟವನ್ನು ತಗ್ಗಿಸಲು, ಟ್ರೈಗ್ಲಿಸರೈಡ್ಗಳು ಮತ್ತು ಉರಿಯೂತವನ್ನು ಕಡಿಮೆಮಾಡಲು ,ಹೃದ್ರೋಗದ ಹಲವಾರು ಅಪಾಯಕಾರಿ ಅಂಶಗಳನ್ನು ಸುಧಾರಿಸಲು ಸಹಾಯಕ.
ಉಪವಾಸ ಜೀವಕೋಶಗಳಿಂದ ತ್ಯಾಜ್ಯ ವಸ್ತು ತೆಗೆದು ಹಾಕಿ ಪಚನ ಕ್ರಿಯೆ ಪ್ರಚೋದಿಸುತ್ತದೆ.
ಉಪವಾಸ ಕ್ಯಾನ್ಸರ್ ತಡೆಯಲು ಸಹಾಯಕ , ಕಿಮೊತೆರಪಿಯಿಂದ ಉಂಟಾಗುವ ಅಡ್ಡಪರಿಣಾಮಗಳನ್ನು ಕಡಿಮೆ ಮಾಡುತ್ತದೆ.
ಹೊಸ ನರಕೋಶಗಳ ಬೆಳವಣಿಗೆ ಹೆಚ್ಚಿಸಲು ಮತ್ತು ಮಿದುಳನ್ನು ಹಾನಿಯಾಗದಂತೆ ರಕ್ಷಿಸಲು ಸಹಾಯಕ, ಆಲ್ಝೈಮರ್ ನಂತಹ ನರ ರೋಗ ತಡೆಯಲು ಸಹಾಯಕ.

ಸಂಗ್ರಹ ಬರಹ: ವೆಂಕಟೇಶ ಭಂಡಾರಿ, ಕುಂದಾಪುರ

 

Leave a Reply

Your email address will not be published. Required fields are marked *