
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಪ್ರಭಾತ್ ವಾಚ್ ವರ್ಕ್ಸ್ ನ ಹರೀಶ್ ಭಂಡಾರಿ ಮತ್ತು ಶ್ರೀಮತಿ ಜ್ಯೋತಿ ಭಂಡಾರಿಯವರ ಪುತ್ರ ಯಶಸ್ ಎಚ್.ಬಿ. ಭಂಡಾರಿಯವರು 2021-22 ರ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ 583 (97.12% ) ಅಂಕಗಳೊಂದಿಗೆ ತೇರ್ಗಡೆಯಾಗುವುದರೊಂದಿಗೆ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಯಶಸ್ ಎಚ್.ಬಿ. ಭಂಡಾರಿ ಇವರು ಕಾರ್ಕಳದ ಕ್ರಿಯೆಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ. ಯಶಸ್ ಎಚ್.ಬಿ. ಭಂಡಾರಿ ಇವರು ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ದೊಡ್ಡ ಸಾಧನೆ ಮಾಡಲಿ , ಪೋಷಕರಿಗೆ ,ಸಮಾಜಕ್ಕೆ ಹೆಮ್ಮೆ ತರಲಿ, ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.